ಕೊರೊನಾ ವಾರಿಯರ್ಸ್ ಗಳ ಬೇಡಿಕೆ, ಸಮಸ್ಯೆಯ ಬಗ್ಗೆ ಸರಕಾರದ ಅಸಡ್ಡೆ ಸರಿಯಲ್ಲ: ರಮೇಶ್ ಕಾಂಚನ್

ಉಡುಪಿ: ಕೊರೊನಾ ಬಂದಾಗಿನಿಂದಲೂ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಹಗಲಿರುಳು ಎನ್ನದೇ ದುಡಿಯುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಮಾತ್ರ ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ ಎಂದು ಉಡುಪಿ ನಗರಸಭಾ ಸದಸ್ಯ ರಮೇಶ್ ಕಾಂಚನ್ ದೂರಿದ್ದಾರೆ. ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ ಮಾದರಿಯಲ್ಲಿ ವೇತನ ಪರಿಷ್ಕರಣೆ ಮಾಡಬೇಕು ಎನ್ಮುವುದು ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮನವಿ ಮಾಡಿತ್ತು. ಆದರೆ ಸರ್ಕಾರ ಈ ಬಗ್ಗೆ ಯಾವುದೇ ಸ್ಪಂದನೆ ನೀಡದೆ, ಅಸಡ್ಡೆ ತೋರಿದೆ […]