ನಾರಾಯಣ ಗುರುಗಳ ಆದರ್ಶ ಚಿಂತನೆಗಳು ಅರ್ಥಪೂರ್ಣವಾದುದು: ಸಚಿವ ವಿ. ಸುನಿಲ್ ಕುಮಾರ್

ಉಡುಪಿ: ರಾಜ್ಯಮಟ್ಟದಲ್ಲಿ ನಾರಾಯಣ ಗುರುಗಳ ಜಯಂತಿಯನ್ನು ಇಂದು ಅರ್ಥಪೂರ್ಣವಾಗಿ ಆಚರಿಸಲಾಗಿದ್ದು, ನಾರಾಯಣ ಗುರುಗಳ ಆದರ್ಶ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು. ಅವರು ಇಂದು ಬನ್ನಂಜೆ ನಾರಾಯಣಗುರು ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಜಿಲ್ಲಾಡಳಿತ, ಬಿಲ್ಲವ ಸೇವಾ ಸಂಘ ಇವರ ಸಂಯುಕ್ತಾಶ್ರದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಬಾರಿಯ 75 ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ […]