ಸಂಸತ್ ಗ್ರಂಥಾಲಯಕ್ಕೆ ಉಡುಪಿಯ ಮಹಾಭಾರತ ಗ್ರಂಥ
ನವದೆಹಲಿ: ನೂರು ವರ್ಷಗಳ ನಂತರ ದೇಶದಲ್ಲಿ ಪ್ರಕಟವಾಗಿರುವ ಮಹಾಭಾರತ ಕೃತಿಯ ಪರಿಷ್ಕೃತ ಆವೃತ್ತಿಯ (ಸಂಸ್ಕೃತ 24 ಸಂಪುಟಗಳು) ಒಂದು ಪ್ರತಿಯನ್ನು ಭಾರತದ ಶಕ್ತಿ ಕೇಂದ್ರ ಸಂಸತ್ತಿನ ಗ್ರಂಥಾಲಯಕ್ಕಾಗಿ ಸಲ್ಲಿಸಲಾಗಿದೆ. ಶ್ರೀ ಪಲಿಮಾರು ಮಠದ ತತ್ವ ಸಂಶೋಧನ ಸಂಸತ್ ನ ವತಿಯಿಂದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ನೇತೃತ್ವದಲ್ಲಿ ಪ್ರಕಟಗೊಂಡು ಶ್ರೀ ವಿಶ್ವೇಶತೀರ್ಥ ಶ್ರೀಪಾದರೂ ಸೇರಿದಂತೆ ಅನೇಕಮಾಧ್ವ ಮಠಾಧೀಶರ ಉಪಸ್ಥಿತಿಯಲ್ಲಿ ಪಲಿಮಾರು ಪರ್ಯಾಯದ ಅವಧಿಯಲ್ಲಿ ಉಡುಪಿ ಕೃಷ್ಣ ಮಠದಲ್ಲಿ ವೈಭವದ ಸಮಾರಂಭದಲ್ಲಿ ಲೋಕಾರ್ಪಣೆಗೊಂಡಿತ್ತು. ಮಂಗಳವಾರ ದೆಹಲಿಯಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ […]