ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮೆಟೆಡ್ ನೂತನ ಅಧ್ಯಕ್ಷರಾಗಿ ಕೆ.ಉದಯ ಕುಮಾರ್ ಶೆಟ್ಟಿ ಪದಗ್ರಹಣ

ಬೆಂಗಳೂರು: ಕರ್ನಾಟಕ ಸರಕಾರ ಸ್ವಾಮ್ಯದ, 77 ವರ್ಷಗಳ ಇತಿಹಾಸವಿರುವ ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇದರ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ಪದಗ್ರಹಣ ಸಮಾರಂಭವು ಬೆಂಗಳೂರು ಯಶವಂತಪುರದ ಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ನಡೆಯಿತು. ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು, ಒಳನಾಡ ಜಲಸಾರಿಗೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಇವರು ಕೆ.ಉದಯ ಕುಮಾರ್ ಶೆಟ್ಟಿಯವರ ಪದಗ್ರಹಣವನ್ನು ನೆರವೇರಿಸಿ, ಅಭಿನಂದಿಸಿದರು. ಸಂಸ್ಥೆಯ ನೂತನ ಅಧ್ಯಕ್ಷರಾಗಿ ಜಬಾಬ್ದಾರಿ ಸ್ವೀಕರಿಸಿದ […]
ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ನ ಅಧ್ಯಕ್ಷರಾಗಿ ಕೆ.ಉದಯ ಕುಮಾರ್ ಶೆಟ್ಟಿ ನೇಮಕ

ಉಡುಪಿ: ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ನ ಅಧ್ಯಕ್ಷರಾಗಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿಯೂ ಇವರು ಸೇವೆ ಸಲ್ಲಿಸಿದ್ದಾರೆ. ಕಳೆದ ಎರಡು ದಶಕಗಳಿಂದ ಪಕ್ಷದಲ್ಲಿ ಸಕ್ರಿಯರಾಗಿದ್ದಾರೆ