ಕರಾವಳಿಯಾದ್ಯಂತ ಮುಂದಿನ ಐದು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಉಡುಪಿ: ಕರಾವಳಿಯಾದ್ಯಂತ ಮುಂದಿನ ಐದು ದಿನಗಳ‌ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 30ರಿಂದ ಮೇ 4ರ ವರೆಗೆ ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ‌ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.