ಕರಾವಳಿಯಾದ್ಯಂತ ಮುಂದಿನ ನಾಲ್ಕೈದು ದಿನ ಗುಡುಗು ಸಹಿತ ಮಳೆ ಸಾಧ್ಯತೆ
ಉಡುಪಿ: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಬಿರುಗಾಳಿ, ಗುಡುಗು ಸಿಡಿಲಿನೊಂದಿಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. ಮೇ 7ರಿಂದ 11ರವರೆಗೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಅನೇಕ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಬಿರುಗಾಳಿಯೊಂದಿಗೆ ಮಳೆ ಸುರಿಯಲಿದೆ ಎಂದು ಹೇಳಿದೆ.