ನೂತನ ಸಂಸತ್ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿದ ಪ್ರಧಾನಿ

ನವದೆಹಲಿ: ದೆಹಲಿಯಲ್ಲಿ ನಿರ್ಮಿಸಲಾಗುವ ನೂತನ ಸಂಸತ್‌ ಕಟ್ಟಡಕ್ಕೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಭೂಮಿಪೂಜೆ ನೆರವೇರಿಸಿದರು. ಶೃಂಗೇರಿ ಮಠದ ಪುರೋಹಿತರು ಭೂಮಿಪೂಜೆಗೆ ಸಂಬಂಧಿಸಿದ ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು. ಸಂಪುಟದ ಸಚಿವರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಹಲವು ದೇಶಗಳ ರಾಯಭಾರಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 900 ರಿಂದ 1200 ಸಂಸತ್ ಸದಸ್ಯರು ಕುಳಿತುಕೊಳ್ಳುವಂತಹ ಸಾಮರ್ಥ್ಯವಿರುವ ಈ ಭವನದ ಒಟ್ಟು ವಿಸ್ತೀರ್ಣ 64,500 ಚದರ ಮೀಟರ್‌.  ₹971 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ನೂತನ ಸಂಸತ್‌ ಭವನದ ನಿರ್ಮಾಣ […]