ಐಪಿಎಲ್ 2021 ಉಳಿದ ಪಂದ್ಯಗಳು ಯುಎಇಗೆ ಸ್ಥಳಾಂತರ
ಮುಂಬೈ: ಕೋವಿಡ್‌ನಿಂದಾಗಿ ಅರ್ಧದಲ್ಲೇ ಮೊಟಕುಗೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಉಳಿದಿರುವ ಪಂದ್ಯಗಳು ಯುಎಇನಲ್ಲಿ ಆಯೋಜನೆಯಾಗಲಿವೆ. ಸೌರವ್ ಗಂಗೂಲಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ವಿಶೇಷ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಗಿದೆ. ಕೊರೊನಾವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಮುಂದೂಡಿರುವ ಐಪಿಎಲ್ ಟೂರ್ನಿಯ ಉಳಿದಿರುವ ಪಂದ್ಯಗಳನ್ನು ಯುಎಇನಲ್ಲಿ ಆಯೋಜಿಸಲಾಗುವುದು ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಹೇಳಿಕೆಯನ್ನು ಎಎನ್‌ಐ ಟ್ವೀಟ್ ಮಾಡಿದೆ. ಐಪಿಎಲ್‌ನಲ್ಲಿ ಬಾಕಿ ಉಳಿದಿರುವ […]