ಬ್ಯಾರಿ ಭಾಷೆಯ ಶ್ರೀಮಂತಿಕೆ ಉಳಿವಿಗೆ ಲಿಪಿ ಅಗತ್ಯ: ರಹೀಂ ಉಚ್ಚಿಲ್

ಉಡುಪಿ: 1400 ವರ್ಷಗಳ ಇತಿಹಾಸ ಹೊಂದಿರುವ ಬ್ಯಾರಿ ಭಾಷೆಗೆ ಲಿಪಿ ಇರಲಿಲ್ಲ. ಈವರೆಗೆ ನಾವು ಬರವಣಿಗೆಗೆ ಕನ್ನಡವನ್ನೇ ಅವಲಂಬಿಸಿಕೊಂಡು ಬಂದಿದ್ದೇವೆ. ಭಾಷೆಯ ಶ್ರೀಮಂತಿಕೆ ಉಳಿಸಲು, ಮುಂದಿನ ಜನಾಂಗ ಬ್ಯಾರಿ ಭಾಷೆಯನ್ನು ಕಲಿಯಲು ಅನುಕೂಲವಾಗುವಂತೆ ಲಿಪಿಯನ್ನು ಹುಟ್ಟುಹಾಕಲಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಹೇಳಿದ್ದಾರೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಉಡುಪಿ ಜಿಲ್ಲಾ ಬ್ಯಾರಿ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಉಡುಪಿ ಬ್ರಹ್ಮಗಿರಿ ಲಯನ್ಸ್ ಭವನದಲ್ಲಿ ಬುಧವಾರ ಆಯೋಜಿಸಲಾದ ಪೆರ್ನಾಲ್ […]