ಸೇವಾ ಮನೋಭಾವದಿಂದ ಗೋಶಾಲೆ ನಿರ್ವಹಣೆ ಮಾಡಬೇಕು: ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ಗೋಶಾಲೆಗಳಲ್ಲಿನ ಗೋವುಗಳ ಪಾಲನೆಯನ್ನು ಸೇವಾ ಮನೋಭಾವದಿಂದ ಯಾವುದೇ ಪ್ರತಿಫಲಗಳನ್ನು ಬಯಸದೇ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಹೇಳಿದರು. ಅವರು ಸೋಮವಾರ ತಮ್ಮ ಕಛೇರಿಯಲ್ಲಿ ನಡೆದ ಪ್ರಾಣಿ ದಯಾ ಸಂಘದ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದಲ್ಲಿ ಸರಕಾರ ಜಾನುವಾರು ಹತ್ಯ ಪ್ರತಿಬಂಧಕ ಕಾಯ್ದೆ ಹಾಗೂ ಸಂರಕ್ಷಣೆ ಕಾನೂನು ಜಾರಿಗೆ ತಂದಿದೆ. ಗೋರಕ್ಷಣೆಗಾಗಿ ಸರಕಾರ ಜಿಲ್ಲೆಗೊಂದರಂತೆ ಗೋಶಾಲೆ ಆರಂಭಿಸಲು ಮುಂದಾಗಿದ್ದು ಪ್ರತಿ ಜಿಲ್ಲೆಗೆ ಮೊದಲನೇ ಹಂತದಲ್ಲಿ 24 ಲಕ್ಷ ರೂಗಳ ಅನುದಾನ ಬಿಡುಗಡೆ […]