ಮುಂದಿನ ಉತ್ತರಾಯಣದಲ್ಲಿ ಶಿರೂರು ಮಠಕ್ಕೆ ಉತ್ತರಾಧಿಕಾರಿ ನೇಮಕ: ಸೋದೆ ಶ್ರೀ
ಉಡುಪಿ: ಮುಂದಿನ ಉತ್ತರಾಯಣದಲ್ಲಿ ಶಿರೂರು ಮಠಕ್ಕೆ ಉತ್ತರಾಧಿಕಾರಿಯನ್ನು ನೇಮಕ ಮಾಡಲಾಗುವುದು ಎಂದು ಸೋದೆ ಮಠಾಧೀಶ ವಿಶ್ವವಲ್ಲಭತೀರ್ಥ ಶ್ರೀಪಾದರು ಹೇಳಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಶಿರೂರು ಮಠಕ್ಕೆ ಯೋಗ್ಯ ವಟುವನ್ನು ಆಯ್ಕೆ ಮಾಡಿದ್ದೇವೆ. ಆತನಿಗೆ ವೇದಾಭಾಸ್ಯಗಳ ತರಬೇತಿ ನೀಡಲಾಗುತ್ತಿದೆ. ಇದಕ್ಕೆ ಅಷ್ಟಮಠಗಳ ಹಿರಿಯ ಮಠಾಧೀಶರ ಪ್ರೋತ್ಸಾಹ, ಸಹಕಾರವಿದೆ. ಎಲ್ಲರೂ ಮನಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಶಿರೂರು ಮಠ ಇನ್ನಷ್ಟು ಅಭಿವೃದ್ಧಿ ಹೊಂದಬೇಕು. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು. ಶಿರೂರು ಲಕ್ಷ್ಮೀವರತೀರ್ಥ ಸ್ವಾಮೀಜಿ ವೃಂದಾವನವೃಸ್ಥರಾದ ಮೇಲೆ ಮಠದ […]