ವಿದ್ಯುತ್ ತಗುಲಿ ಯುವಕ ಮೃತ್ಯು

ಬೆಳ್ತಂಗಡಿ: ಇಲ್ಲಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಎಂಬಲ್ಲಿ ವಿದ್ಯುತ್ ತಗುಲಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಕೌಡಂಗೆ ಮನೆಯ ಚನನ ಗೌಡ ಎಂಬವರ ಪುತ್ರ ಅವಿನಾಶ್ ಗೌಡ (23) ಮೃತ ಯುವಕ. ಅವಿನಾಶ್ ಮೇಸ್ತ್ರಿ ಹಾಗೂ ಇಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದರು. ವಿದ್ಯುತ್ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಗಂಭೀರ ಗಾಯಗೊಂಡಿದ್ದರು. ಕೂಡಲೇ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿದ್ದರು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.