ಹಿರಿಯಡಕ ಪಿಯು ಹಾಗೂ ಪದವಿ ಕಾಲೇಜಿನಲ್ಲಿ ಕಳ್ಳತನ: ದೂರು ದಾಖಲು
ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಪದವಿ ಪೂರ್ವ ಕಾಲೇಜಿನ ಬೀಗ ಮುರಿದು ಒಳ ನುಗ್ಗಿದ ಕಳ್ಳರು, ಕಪಾಟಿನಲ್ಲಿದ್ದ ಸಾವಿರಾರು ರೂ.ಗಳನ್ನು ಕಳವು ಮಾಡಿಕೊಂಡು ಪರಾರಿಯಾದ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಪದವಿ ಪೂರ್ವ ಕಾಲೇಜಿನ ಪ್ರವೇಶದ್ವಾರದ ಬಾಗಿಲಿಗೆ ಹಾಕಿದ ಬೀಗವನ್ನು ಮುರಿದು ಕಾಲೇಜಿನೊಳಗೆ ಒಳ ನುಗ್ಗಿದ ಕಳ್ಳರು ಪ್ರಾಂಶುಪಾಲರ ಕಚೇರಿಗೆ ಲಗ್ಗೆ ಇಟ್ಟಿದ್ದಾರೆ. ಅಲ್ಲಿ ಕಪಾಟಿನ ಬೀಗವನ್ನು ಒಡೆದು 9 ಸಾವಿರ ರೂ ನಗದು […]