ಕುಂದಾಪುರ: ಕಳ್ಳತನ ಆರೋಪಿಗಳ ಬಂಧನ; 16 ಲಕ್ಷ ಮೌಲ್ಯದ ಸ್ವತ್ತು ಸ್ವಾಧೀನ

ಕುಂದಾಪುರ: ಕುಂದಾಪುರ ಠಾಣಾ ವ್ಯಾಪ್ತಿಯ ಕೋಟೇಶ್ವರ ಗ್ರಾಮದ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಕುಂದಾಪುರ ಪಿಎಸ್ಐ ಮತ್ತು ತಂಡ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ 15 ಲಕ್ಷ ಮೌಲ್ಯದ ಚಿನ್ನಾಭರಣಗಳು, 1 ಲಕ್ಷ ಮೌಲ್ಯದ ಬೆಳ್ಳಿ ಒಟ್ಟು 16 ಲಕ್ಷ ಮೌಲ್ಯದ ಸ್ವತ್ತುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಪ್ರಕರಣ ಕಾಸರಗೋಡಿನ ಹಾಶಿಮ್ ಎ.ಎಚ್ ಮತ್ತು ಅಬೂಬಕ್ಕರ್ ಸಿದ್ದಿಕ್ ಎಂಬ ಕಳ್ಳರಿಬ್ಬರು ಕೋಟೇಶ್ವರದ ಪ್ರಸನ್ನ ನಾರಾಯಣ ಆಚಾರ್ಯರವರ ಮನೆಯ ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ್ದರು. ಈ ಇಬ್ಬರನ್ನೂ […]

ಕಾನ್ಪುರ: 10 ಅಡಿ ಉದ್ದದ ಸುರಂಗ ಕೊರೆದು ಬ್ಯಾಂಕ್ ನಿಂದ 1 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದ ಬ್ಯಾಂಕ್‌ ಒಂದರಲ್ಲಿ ಕಳ್ಳರು 1 ಕೋಟಿ ರೂ ಮೌಲ್ಯದ ಚಿನ್ನಾಭರಣ ದೋಚಿರುವ ಬಗ್ಗೆ ವರದಿಯಾಗಿದೆ. 10 ಅಡಿ ಉದ್ದದ ಸುರಂಗದ ಮೂಲಕ ಬ್ಯಾಂಕ್‌ನ ಲಾಕರ್ ರೂಂ ಪ್ರವೇಶಿಸಿರುವ ಕಳ್ಳರು 1.8 ಕೆ.ಜಿ ಬಂಗಾರ ದೋಚಿದ್ದಾರೆ. ಇದರ ಮೌಲ್ಯ ಸುಮಾರು 1 ಕೋಟಿ ರೂ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಭಾನುತಿ ಶಾಖೆಯ ಪಕ್ಕದಲ್ಲಿರುವ ಖಾಲಿ ಜಾಗದಿಂದ ಅವರು 4 ಅಡಿ ಅಗಲ 10 ಅಡಿ ಉದ್ದದ […]

ಕಲ್ಯಾ: ಮಾಲಕಿ ಮನೆಯಲ್ಲಿಲ್ಲದ ವೇಳೆ ಕಳ್ಳತನ; ಕೃತ್ಯವೆಸಗಿದ ಸ್ನೇಹಿತೆಯ ಬಂಧನ

ಉಡುಪಿ: ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕಂಗಿತ್ತುವಿನ ಉಷಾ ಜಗದೀಶ್‌ ಆಂಚನ್‌ ಎಂಬವರ ಮನೆಯಲ್ಲಿ ಡಿಸೆಂಬರ್ 3ರಂದು ಕಳವು ಪ್ರಕರಣ ನಡೆದಿದ್ದು, ಕಳ್ಳರು ಮನೆಯಲ್ಲಿದ್ದ 4.50 ಲಕ್ಷ ರೂ. ಮೌಲ್ಯದ ಸುಮಾರು 156 ಗ್ರಾಂ ತೂಕದ ಬಂಗಾರದ ಒಡವೆಗಳನ್ನು ಕಳವು ಮಾಡಿಕೊಂಡು ಹೋದ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಬೇಧಿಸಿರುವ ಪೊಲೀಸರು ಕಾರ್ಕಳದಲ್ಲಿ ನಡೆದ ಕಳ್ಳತನದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬಂಟ್ವಾಳ ಅರಂಬೋಡಿ ಕಾಂತರಬೆಟ್ಟು ನಿವಾಸಿ ಪ್ರಸಾದ್‌ (34) ಹಾಗು ಕಳ್ಳತನಕ್ಕೆ […]

ಉಡುಪಿ-ಬ್ರಹ್ಮಾವರ ವ್ಯಾಪ್ತಿ ಕಳವು ಪ್ರಕರಣ ಬೇಧಿಸಿದ ಪೊಲೀಸರು: ಆರೋಪಿಗಳ ಬಂಧನ; ಚಿನ್ನಾಭರಣ ವಶ

ಬ್ರಹ್ಮಾವರ: ಬ್ರಹ್ಮಾವರ ಮತ್ತು ಕೋಟಾ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಬ್ರಹ್ಮಾವರ ಸಿಪಿಐರವರ ವಿಶೇಷ ತಂಡ ಯಶಸ್ವಿಯಾಗಿದೆ. ಆರೋಪಿಯಿಂದ 7 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ರಾತ್ರಿ ಸಮಯದಲ್ಲಿ ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ಕಾದೂರು ತಂತ್ರಾಡಿಯ ವಿಜಯ್ ಕುಮಾರ್ ಶೆಟ್ಟಿಯನ್ನು ಬಂಧಿಸಲಾಗಿದೆ. ಜೈಲಿನಿಂದ ಬಿಡುಗಡೆಯಾದ ಕಳ್ಳತನದ ಆರೋಪಿಗಳ ಮಾಹಿತಿಯನ್ನು ಕಲೆಹಾಕಿ ಎಲ್ಲರ ಮೇಲೆ ನಿಗಾ ಇರಿಸಲಾಗಿತ್ತು. ಸೋಮವಾರದಂದು ಸಂಜೆ ನೀಲಾವರ ಕ್ರಾಸ್ ಬಳಿ ಆರೋಪಿ […]

ಉಡುಪಿ: ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳ್ಳತನ

ಉಡುಪಿ: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳವು ಮಾಡಿರುವ ಘಟನೆ ಡಿ.1ರಂದು ಬೆಳಗಿನ ಜಾವ ಅಂಬಲಪಾಡಿ ಜಂಕ್ಷನ್ ಬಳಿ ನಡೆದಿದೆ. ವಾಹನದಲ್ಲಿ ಬಂದ ಮೂವರು ವ್ಯಕ್ತಿಗಳು ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಲಾರಿಯಿಂದ 20 ಲೀಟರ್ ಡಿಸೇಲ್ ಕಳವು ಮಾಡಿದ್ದಾರೆ ಎನ್ನಲಾಗಿದೆ. ಕಳವಾದ ಪೆಟ್ರೋಲ್ ನ ಮೌಲ್ಯ 1745ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.