ತೆಂಕನಿಡಿಯೂರು ಗ್ರಾಪಂ ಮುಖ್ಯದ್ವಾರ ತೆರವು: ಪ್ರಶ್ನಿಸಿದ ಸದಸ್ಯರು, ಗ್ರಾಮಸ್ಥರ ಮೇಲೆ ಜಾತಿ ನಿಂದನೆ ಕೇಸ್

ಉಡುಪಿ: ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಾಡದೆ ತೆಂಕನಿಡಿಯೂರು ಗ್ರಾಪಂ ಮುಖ್ಯದ್ವಾರವನ್ನೇ ಬದಲಾವಣೆ ಮಾಡಿರುವುದನ್ನು ಪ್ರಶ್ನಿಸಿದ ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ಥರ ಮೇಲೆ ಗ್ರಾಪಂ ಅಧ್ಯಕ್ಷರು ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದು ಖಂಡನೀಯ. ಅಧಿಕಾರ ದುರುಪಯೋಗ ಪಡಿಸಿಕೊಂಡಿರುವ ಅಧ್ಯಕ್ಷರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಗ್ರಾಪಂ ಸದಸ್ಯ ಪ್ರಖ್ಯಾತ್ ಶೆಟ್ಟಿ ಆಗ್ರಹಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಜನರಿಂದ ಆಯ್ಕೆಯಾದ ಸದಸ್ಯರಿಗೆ ಪಂಚಾಯತ್ ನಲ್ಲಿ ನಡೆದ ತಪ್ಪನ್ನು ಪ್ರಶ್ನಿಸುವ ಹಕ್ಕಿದೆ. ಆದರೆ ಬಿಜೆಪಿ ಬೆಂಬಲಿತ ಅಧ್ಯಕ್ಷರು ಸೂಕ್ತ ಉತ್ತರ […]