ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ: ಅರುಣ್‌ ಸಿಂಗ್‌

ನವದೆಹಲಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ. ಅವರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ತಿಳಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು ಕೋವಿಡ್‌–19 ಸಂದಿಗ್ಧ ಪರಿಸ್ಥಿತಿಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಿದ್ದಾರೆ. ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಹೈಕಮಾಂಡ್‌ ಎದುರು ಯಾವುದೇ ಪ್ರಸ್ತಾವನೆ ಇಲ್ಲ. ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಕೆಲವು ಶಾಸಕರು ಯಡಿಯೂರಪ್ಪ ವಿರುದ್ಧ ದನಿ ಎತ್ತಿದ್ದರೆ, ಇನ್ನು ಕೆಲವರು ಅವರ ಪರ ಸಹಿ ಸಂಗ್ರಹ […]