ಹಿಜಾಬ್ ವಿವಾದದ ಮೂಲಕ ಸರಕಾರಿ ಕಾಲೇಜಿನ ಶೈಕ್ಷಣಿಕ ವಾತಾವರಣ ಕದಡಲು ಯತ್ನಿಸುವವರಿಗೆ ತಕ್ಕ ಉತ್ತರ ನೀಡಲು ಬದ್ಧ: ಯಶ್‍ಪಾಲ್ ಸುವರ್ಣ
ಉಡುಪಿ: ಉಡುಪಿಯ ಸರಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ 6 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವ ವಿಚಾರದಲ್ಲಿ ಗೊಂದಲ ಸೃಷ್ಟಿಸಿ ಕಾಲೇಜಿನ ಶೈಕ್ಷಣಿಕ ವಾತಾವರಣ ಕದಡಲು ಯತ್ನಿಸುವ ಕೆಲವು ಕೋಮುವಾದಿ ಸಮಾಜಘಾತಕ ಶಕ್ತಿಗಳಿಗೆ ತಕ್ಕ ಉತ್ತರ ನೀಡಲು ಬದ್ಧ ಎಂದು ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ, ಬಿಜೆಪಿ ಮುಖಂಡ ಯಶ್‍ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 3 ದಿನಗಳಿಂದ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ತರಗತಿಗೆ ಪ್ರವೇಶ ನಿರಾಕರಿಸಿದ ಕಾಲೇಜಿನ ಪ್ರಾಂಶುಪಾಲರಿಗೆ ಒತ್ತಡ ಹೇರಿರುವುದು ಖಂಡನೀಯ. ಕಳೆದ 36 ವರ್ಷಗಳಿಂದ […]