ಕ್ರಿಯೇಟಿವ್ ನ ಮೂರು ವಿದ್ಯಾರ್ಥಿಗಳು ಎನ್ ಡಿ ಎ ಗೆ ಆಯ್ಕೆ
ಕೇಂದ್ರ ಲೋಕಸೇವಾ ಆಯೋಗ (UPSC) ಎಪ್ರಿಲ್ 16, 2023 ರಲ್ಲಿ ನಡೆಸಿದ ಅತ್ಯಂತ ಕಠಿಣಕರವಾದ ರಾಷ್ಟ್ರಮಟ್ಟದ ಎನ್.ಡಿ.ಎ/ಎನ್.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ.ಪೂ ಕಾಲೇಜಿನ 03 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪುಣೆಯ ಖಡಕ್‌ವಾಸ್ಲದಲ್ಲಿರುವ NDA ತರಬೇತಿ ಸಂಸ್ಥೆಯಲ್ಲಿ ಬಿ.ಟೆಕ್ ಅಥವಾ ಬಿ.ಎಸ್.ಸಿ ಪದವಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗಾಗಿ ನಡೆಯುವ ಪರೀಕ್ಷೆಗೆ ದೇಶದಾದ್ಯಂತ ಸುಮಾರು 2.24 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದು, ಅದರಲ್ಲಿ 7,964 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಮುಂದಿನ ಹಂತದಲ್ಲಿ ನಡೆಯುವ ಎಸ್.ಎಸ್.ಬಿ (ಸರ್ವಿಸ್ […]