ಮಹಡಿಯಿಂದ ಕಾಲು ಜಾರಿ ಬಿದ್ದು ಮೂರು ವರ್ಷದ ಮಗು ಮೃತ್ಯು

ಮಂಡ್ಯ: ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೂರು ವರ್ಷದ ಮಗುವೊಂದು ಮೃತಪಟ್ಟ ದಾರುಣ ಘಟನೆ ಮಂಡ್ಯ ನಗರದ ರಾಜಕುಮಾರ್ ಬಡಾವಣೆಯಲ್ಲಿ ಇಂದು ಸಂಭವಿಸಿದೆ. ತಾಯಿ ಮಗುವಿಗೆ ಊಟ ಮಾಡಿಸಿ ಕೈ ತೊಳೆಯಲು ಹೋದ ವೇಳೆ ಮಗು ಮಹಡಿಯ ಮೇಲಿಂದ ಬಿದ್ದು ಸಾವನ್ನಾಪ್ಪಿದೆ ಎನ್ನಲಾಗಿದೆ. ಮಂಡ್ಯ ನಗರದ ರಾಜಕುಮಾರ್ ಬಡಾವಣೆಯ ನಿವಾಸಿ ಸತೀಶ್ ಹಾಗೂ ಶೃತಿ ದಂಪತಿಯ ಮಗಳು ಧನುಶ್ರೀ (3) ಮೃತ ದುರ್ದೈವಿ. ಶೃತಿ ತಮ್ಮ ಮಗಳು ಧನುಶ್ರೀಯನ್ನು ಆಟವಾಡಿಸಿಕೊಂಡು ಮನೆಯ ಮುಂಭಾಗ ಊಟ ಮಾಡಿಸುತ್ತಿದ್ದರು. […]