ಕರಾವಳಿ ಹಾಗೂ ಇತರೆಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಉಡುಪಿ/ ಮಂಗಳೂರು: ಮುಂದಿನ 03 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ ಈ ಜಿಲ್ಲೆಗಳಲ್ಲಿ ಗುಡುಗು ಮಿಂಚಿನ ಸಹಿತ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಂಭವವಿದ್ದು, ಗಂಟೆಗೆ 30-40 ಕಿಮೀ ವೀಗದಲ್ಲಿ ಜೋರಾದ ಗಾಳಿ ಬೀಸುವ ಅನುಮಾವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ಎರಡು ದಿನಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯ ಸೂಚನೆ ನೀಡಿದ ಹವಾಮಾನ ಇಲಾಖೆ

ಉಡುಪಿ: ನ.4 ಮತ್ತು 5 ರಂದು ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಸಂಭವಿಸುವ ಜೊತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.  

ಮೇ 17 ರಿಂದ 21ವರೆಗೆ ಕರ್ನಾಟಕ ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ: ಕರ್ನಾಟಕ ಕರಾವಳಿಯ ವಿವಿಧ ಭಾಗಗಳಲ್ಲಿ ಮೇ 17 ರಿಂದ 21ವರೆಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉದ್ದಕ್ಕೂ ಸಮುದ್ರದಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿಮೀ ತಲುಪುವ ಸಾಧ್ಯತೆ ಇರುವುದರಿಂದ ಮುಂದಿನ 24 ಗಂಟೆಗಳವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಮೇ 19 ರಂದು 205 ಮಿಮೀ, ಮೇ 18 ಮತ್ತು 20 ರಂದು 115 ಮಿಮೀ ಹಾಗೂ ಮೇ 17 ಮತ್ತು […]

ಪ್ರಾಕೃತಿಕ ವಿಕೋಪಗಳ ಮುನ್ಸೂಚನೆ ನೀಡಿ ಹೆಚ್ಚಿನ ಹಾನಿ ತಪ್ಪಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

ಉಡುಪಿ: ಮಳೆಯಿಂದಾಗುವ ಅತಿವೃಷ್ಟಿ ಸೇರಿದಂತೆ ನೈಸರ್ಗಿಕ ಪ್ರಾಕೃತಿಕ ವಿಕೋಪಗಳು ಉಂಟಾಗುವ ಮುನ್ಸೂಚನೆಗಳನ್ನು ಜನರಿಗೆ ಮುಂಚಿತವಾಗಿಯೇ ತಿಳಿಸಿ ಅವುಗಳನ್ನು ಎದುರಿಸುವ ಬಗ್ಗೆ ಅರಿವು ಮೂಡಿಸಿ, ಹಾನಿ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಸೋಮವಾರ ಜಿಲ್ಲಾಧಿಕಾರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಾಗುವ ಯಾವುದೇ ರೀತಿಯ ನೈಸರ್ಗಿಕ ಅವಘಡಗಳು ಮತ್ತು ಅವುಗಳ ಅಡ್ಡ ಪರಿಣಾಮಗಳಿಗೆ ಸ್ಥಳೀಯ ಸಾರ್ವಜನಿಕರು […]

ಸಿಡಿಲು ಬಡಿದು ಯುವಕ‌ ಮೃತ್ಯು

ಕಾರ್ಕಳ: ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳ‌ ತಾಲೂಕಿನ ನೂರಾಲ್ ಬೆಟ್ಟು ಗ್ರಾಮದಲ್ಲಿ ಸೋಮವಾರ ನಡೆದಿದೆ. ನೂರಾಲ್ ಬೆಟ್ಟುವಿನ ಜಾಣಮನೆ ನಿವಾಸಿ 41 ವರ್ಷದ ಜಿಗೀಶ್ ಜೈನ್ ಮೃತ ದುರ್ದೈವಿ. ಜಿಗೀಶ್ ಮನೆಯಲ್ಲಿ ಇದ್ದ ವೇಳೆ ಸಿಡಿಲು ಬಡಿದಿದೆ ಎನ್ನಲಾಗಿದೆ. ಸಿಡಿಲಿನ ಹೊಡೆತಕ್ಕೆ ಜಿಗೀಶ್ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.