ಕರಾವಳಿಯ ಪ್ರತ್ಯೇಕ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ ಸಾಧ್ಯತೆ
ಉಡುಪಿ: ಏಪ್ರಿಲ್ 26 ರಂದು ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಉಳಿದಂತೆ ಏಪ್ರಿಲ್ 27, 28, 29 ಮತ್ತು 30 ರಂದು ಹವಾಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪ್ರಕಟಣೆ ತಿಳಿಸಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಿಂಚಿನ ಸಾಧ್ಯತೆ: ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಏಪ್ರಿಲ್ 23 ಮತ್ತು 24 ರಂದು ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಸಂಭವಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಪ್ರಕಟನೆಯು ಎಚ್ಚರಿಸಿರುತ್ತದೆ. ಉಳಿದಂತೆ ಏಪ್ರಿಲ್ 25, 26, 27 ರಂದು ಹವಾಮಾನದಲ್ಲಿ ಯಾವುದೇ ರೀತಿಯ ಬದಲಾವಣೆಯು ಇರುವುದಿಲ್ಲ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.