ರಾಜ್ಯದಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ..

ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮುಂದಿನ 2 ದಿನ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.