ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಯಶ್ ಪಾಲ್ ಸುವರ್ಣಗೆ ಒಲಿಯಲಿದೆಯೇ ಬಿಜೆಪಿ ಟಿಕೆಟ್?
ಉಡುಪಿ: ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಬಹಳಷ್ಟು ಬಿರುಸು ಪಡೆದುಕೊಂಡಿದೆ. ಈ ಮಧ್ಯೆ ಬಿಜೆಪಿಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಗಾಗಿ ಆಕಾಂಕ್ಷಿಗಳ ನಡುವೆ ಪೈಪೋಟಿ ಶುರುವಾಗಿದೆ. ಆದರೆ ಬಿಜೆಪಿ ಹೈಕಮಾಂಡ್ ಯುವ ನಾಯಕನಿಗೆ ಮಣೆ ಹಾಕಲಿದೆ ಎಂಬ ಅಂಶ ಹೊರಬಿದ್ದಿದೆ. ಈ ವಿಚಾರ ಸದ್ಯ ಬಿಜೆಪಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿದ್ದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ […]