ಇದೇ 27ಕ್ಕೆ ವೇಳಾಪಟ್ಟಿ ಪ್ರಕಟವಾಗಲಿದ್ದು, ವಿಶ್ವಕಪ್ಗೆ ಇನ್ನು ಮೂರೇ ತಿಂಗಳು.
ಐಸಿಸಿ ಇದೇ 27 ರಂದು ಮುಂಬೈನಲ್ಲಿ ಹೋಟೆಲ್ವೊಂದರಲ್ಲಿ ಮಾಧ್ಯಮಗೋಷ್ಟಿ ಕರೆದಿದ್ದು, ಅಂದೇ ವಿಶ್ವಕಪ್ ವೇಳಾಪಟ್ಟಿ ಬಿಡುಗಡೆ ಆಗುವ ಸಾಧ್ಯತೆ ಹೆಚ್ಚಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ವೇಳೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ -BCCI) ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ-ICC)ಗೆ ಕರಡು ವೇಳಾ ಪಟ್ಟಿಯನ್ನು ಸಲ್ಲಿಸಿತ್ತು. ಐಸಿಸಿ ಸ್ಪರ್ಧಿಸುವ ರಾಷ್ಟ್ರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸುವಂತೆ ತಿಳಿಸಿ ಆಯಾ ಕ್ರಿಕೆಟ್ ಮಂಡಳಿಗೆ ಕಳುಹಿಸಿಕೊಟ್ಟಿದೆ ಎಂದು ವರದಿಗಳಾಗಿವೆ. ವಿಶ್ವಕಪ್ ಸನಿಹವಾಗುತ್ತಿದ್ದು, ಇದೇ 27 ರಂದು ಐಸಿಸಿ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. […]