ಕಾಪು: ಬೈಕ್ ಗೆ ಟಿಪ್ಪರ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ಕಾಪು: ಬೈಕ್ ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ‌ ಮೃತಪಟ್ಟ ಘಟನೆ ಕಾಪು ತಾಲೂಕಿನ ಇನ್ನಂಜೆ‌ – ಕಲ್ಲುಗುಡ್ಡೆ ರಸ್ತೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಮೃತ ಬೈಕ್ ಸವಾರನನ್ನು ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ 31 ವರ್ಷದ ಸುನೀಲ್ ಕುಮಾರ್ ಎಂದು ಗುರುತಿಸಲಾಗಿದೆ. ಇನ್ನಂಜೆ‌ – ಕಲ್ಲುಗುಡ್ಡೆ – ಬಂಟಕಲ್‌ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್‌ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಟಿಪ್ಪರ್ ನ ಹಿಂಬದಿಯ ಚಕ್ರದಡಿಗೆ ಸಿಲುಕಿದ […]