ಉದ್ಯಮಿಯಾಗು, ಉದ್ಯೋಗ ನೀಡು ಕಾರ್ಯಾಗಾರ

ಉಡುಪಿ: ಉಡುಪಿ ಹಾಗೂ ಮಂಗಳೂರು ಜಿಲ್ಲೆಗಳ ಉದ್ದಿಮೆಗಳ ಅಭಿವೃದ್ಧಿಗಾಗಿ ಉದ್ಯಮಿಯಾಗು ಹಾಗೂ ಉದ್ಯೋಗ ನೀಡು ಕಾರ್ಯಾಗಾರವು ಮೇ 12 ರಂದು ಮಂಗಳೂರು, ಕೊಡಿಯಾಲ್‌ಬೈಲ್‌ನ ಡಾ.ಟಿ.ಎಮ್.ಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9.00 ರಿಂದ ಮಧ್ಯಾಹ್ನ 3.30 ರವರೆಗೆ ಮಣಿಪಾಲದ ರಜತಾದ್ರಿ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ವರ್ಚುವಲ್ ವೇದಿಕೆ ಮೂಲಕ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಾಗಾರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಯೋಜನೆ, ಮೂಲಸೌಕರ್ಯ, ಹಣಕಾಸು ಸೌಲಭ್ಯ […]