ಉಡುಪಿ ಜಿಲ್ಲೆಯ ಕೋಡಿಬೆಂಗ್ರೆ: ಅಧಿಕೃತ ತಂಬಾಕು ಮುಕ್ತ ಗಾಮ

ಉಡುಪಿ: ಕೋಡಿಬೆಂಗ್ರೆ ಗ್ರಾಮವು ತಂಬಾಕು ಮುಕ್ತವಾಗಬೇಕು ಎಂದು 20 ವರ್ಷಗಳ ಹಿಂದೆಯೇ ಸ್ಥಳೀಯ ಗ್ರಾಮಸ್ಥರು ನಿರ್ಧರಿಸಿ, ದೃಢ ನಿರ್ಧಾರದೊಂದಿಗೆ ಕೋಡಿಬೆಂಗ್ರೆಯನ್ನು ತಂಬಾಕು ಮುಕ್ತ ಗ್ರಾಮವಾಗಿಸಿದ್ದರು. ಈಗ ಸರ್ಕಾರದಿಂದ ಅಧಿಕೃತ ಘೋಷಣೆಯನ್ನು ಮಾಡುತ್ತಿರುವುದು ಇದಕ್ಕೆ ಶ್ರೀರಕ್ಷೆಯನ್ನು ನೀಡಿದ ಹಾಗಿದೆ, ಇದರಿಂದಾಗಿ ಗ್ರಾಮದ ಗ್ರಾಮಸ್ಥರ ಜವಾಬ್ದಾರಿ ಇನ್ನೂ ಹೆಚ್ಚಾಗಿದೆ ಎಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೆಕ್ಷಣಾ ಘಟಕ, ರಾಷ್ಟ್ರೀಯ ತಂಬಾಕು ನಿಯಂತ್ರಣ […]