ಏ.1ರಿಂದ ತಂಬಾಕು ಉತ್ಪನ್ನ, ಚಿನ್ನ ಬೆಳ್ಳಿ ದುಬಾರಿ; ಟಿವಿ- ಮೊಬೈಲ್ ಅಗ್ಗ

ನವದೆಹಲಿ: ಸಿಗರೇಟ್, ಪಾನ್ ಮಸಾಲಾ ಸೇರಿದಂತೆ ತಂಬಾಕು ಉತ್ಪನ್ನಗಳನ್ನು ಸೇವನೆ ಮಾಡುವವರಿಗೆ ಏಪ್ರಿಲ್ 1ರಿಂದ ಜೇಬಿನ ಮೇಲೆ ಹೆಚ್ಚಿನ ಹೊರೆ ಬೀಳಲಿದೆ. ಸಿಗರೇಟ್ ಹಾಗೂ ಪಾನ್ ಮಸಾಲಾ ಸೇರಿದಂತೆ ತಂಬಾಕು ಉತ್ಪನ್ನಗಳ ಮೇಲಿನ ಜಿ ಎಸ್ ಟಿ ಪರಿಹಾರ ಸೆಸ್ ಮಿತಿ ಅಥವಾ ಗರಿಷ್ಠ ದರವನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದೆ. ಈ ದರವು ಏ.1ರಿಂದ ಜಾರಿಗೆ ಬರಲಿದೆ. 2023ರ ಹಣಕಾಸು ವಿಧೇಯಕದ ತಿದ್ದುಪಡಿಯ ಭಾಗವಾಗಿ ಈ ದರವನ್ನು ನಿಗದಿಪಡಿಸಲಾಗಿದೆ. ಮಾ. 24 ರಂದು ಲೋಕಸಭೆಯಲ್ಲಿ ಹಣಕಾಸು ಮಸೂದೆ […]
ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ: 42 ಪ್ರಕರಣ ದಾಖಲು

ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಇಂದು ಉಡುಪಿ ನಗರ ವ್ಯಾಪ್ತಿ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4 ಮತ್ತು 6(ಎ) ಅಡಿಯಲ್ಲಿ ಒಟ್ಟು 42 ಪ್ರಕರಣ ದಾಖಲಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ರಾಷ್ಟೀಯ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರ್ತಿ ಮಂಜುಳಾ […]
ಮಣಿಪಾಲ ನಗರ ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ದಳದಿಂದ ದಾಳಿ; ದಂಡ ವಸೂಲಿ

ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಉಡುಪಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಮಣಿಪಾಲ ನಗರ ವ್ಯಾಪ್ತಿಯ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್ ಹಾಗೂ ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 28 ಪ್ರಕರಣ ದಾಖಲಿಸಿ, 4800 ರೂ. ದಂಡ ವಸೂಲಿ ಮಾಡಲಾಯಿತು. ಈ ಸಂದರ್ಭದಲ್ಲಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುಬ್ರಹ್ಮಣ್ಯ ರಾವ್, ಹಿರಿಯ […]
ಮಾಹೆ: ತಂಬಾಕು ಮಾರಾಟಗಾರರ ಪರವಾನಗಿ ಪರಿಗಣನೆ ಕಾರ್ಯಾಗಾರ ಆಯೋಜನೆ

ಮಣಿಪಾಲ: ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಮತ್ತು ಯೂನಿಯನ್ (ಕ್ಷಯರೋಗ ಮತ್ತು ಶ್ವಾಸಕೋಶದ ಕಾಯಿಲೆಗಳ ವಿರುದ್ಧ ಅಂತರರಾಷ್ಟ್ರೀಯ ಒಕ್ಕೂಟ) ನ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ಸರ್ವೇಕ್ಷಣಾ ಕಚೇರಿ, ಉಡುಪಿ ಜಿಲ್ಲಾ ಪಂಚಾಯತ್, ಮತ್ತು ಉಡುಪಿ ನಗರ ಪಾಲಿಕೆಯ ವತಿಯಿಂದ ರಾಷ್ಟ್ರೀಯ ಸಾರ್ವಜನಿಕ ಆರೋಗ್ಯ ದಂತವೈದ್ಯಶಾಸ್ತ್ರ ವಾರ ಆಚರಣೆಯ ಅಂಗವಾಗಿ “ಉಡುಪಿ ಜಿಲ್ಲೆಯಲ್ಲಿ ತಂಬಾಕು ಮಾರಾಟಗಾರರ ಪರವಾನಗಿ ಪರಿಗಣನೆಗಳು” ಈ ಕುರಿತು ಸಾಮರ್ಥ್ಯ ವರ್ಧನೆಯ ಕಾರ್ಯಾಗಾರವನ್ನು ಜೂನ್ 23 ರಂದು ಕೆಎಂಸಿ ಮಣಿಪಾಲದ ಟಿ.ಎಂ.ಎ ಪೈ ಸಭಾಂಗಣದಲ್ಲಿ […]
ಕಾಪು ವ್ಯಾಪ್ತಿ ಪ್ರದೇಶದಲ್ಲಿ ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ: 26 ಪ್ರಕರಣ ದಾಖಲು

ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಕಾಪು ವ್ಯಾಪ್ತಿ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4 ಅಡಿಯಲ್ಲಿ 14 ಹಾಗೂ ಸೆಕ್ಷನ್ 6(ಎ) ಅಡಿಯಲ್ಲಿ 12 ಪ್ರಕರಣ ಸೇರಿದಂತೆ ಒಟ್ಟು 26 ಪ್ರಕರಣ ದಾಖಲಿಸಿ, ಹೋಟೆಲ್ ಮತ್ತು ಅಂಗಡಿಗಳಲ್ಲಿ ಆಹಾರ ಪರವಾನಿಗೆಯನ್ನು ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ […]