ಇಂದು ಪರ್ಯಾಯ ಶ್ರೀ ಅದಮಾರು ಮಠಾಧೀಶರಿಗೆ ನಾಗರಿಕ ಅಭಿವಂದನಾ ಸಮಾರಂಭ

ಉಡುಪಿ ಶ್ರೀ ಕೃಷ್ಣಾಪುರ ಪರ್ಯಾಯೋತ್ಸವ ಸಮಿತಿ ವತಿಯಿಂದ ಜನವರಿ 17ರ ಸೋಮವಾರ ಸಂಜೆ 6.30 ಕ್ಕೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಗೆ ನಾಗರಿಕ ಅಭಿವಂದನಾ ಕಾರ್ಯಕ್ರಮ‌ ನಡೆಯಲಿದೆ . ಭಾವೀ ಪರ್ಯಾಯ ಶ್ರೀ ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.ಪ್ರಸಿದ್ಧ ವಿದ್ವಾಂಸ ಕೃಷ್ಣರಾಜ ಕುತ್ಪಾಡಿ ಅಭಿವಂದನಾ ಭಾಷಣ ಮಾಡಲಿರುವರು. ಪರ್ಯಾಯೋತ್ಸವ ಸಮಿತಿ ಗೌರವಾಧ್ಯಕ್ಷ […]