ಇಂದಿನ ಐಪಿಎಲ್ ಪಂದ್ಯ ನಿಗದಿಯಂತೆ ನಡೆಯಲಿದೆ: ಬಿಸಿಸಿಐ

ದುಬೈ: ಸನ್‌ರೈಸರ್ಸ್ ಹೈದರಾಬಾದ್ ತಂಡದ ಆಟಗಾರ ಟಿ. ನಟರಾಜನ್ ಗೆ ಕೋವಿಡ್ ಕಾಣಿಕೊಂಡಿದ್ದು, ಇದರಿಂದ ದುಬೈನಲ್ಲಿ ಇಂದು ನಡೆಯಬೇಕಿದ್ದ ಸನ್ ರೈಸರ್ಸ್ ಹಾಗೂ ಡೆಲ್ಲಿ ನಡುವಿನ ಪಂದ್ಯದ ಮೇಲೆ ಕೋವಿಡ್ ಕರಿನೆರಳು ಬೀರಿತ್ತು. ಇದೀಗ ಈ ಬಗ್ಗೆ ಬಿಸಿಸಿಐ ಸ್ಪಷ್ಟನೆ ನೀಡಿದ್ದು, ಐಪಿಎಲ್ ಟೂರ್ನಿಯಲ್ಲಿ ಬುಧವಾರ ದುಬೈಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯವು ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದೆ.