ರಾತ್ರೋರಾತ್ರಿ ಕಾರ್ಮಿಕರ ನೆರವಿಗೆ ಧಾವಿಸಿದ ಅಧಿಕಾರಿಗಳು: ಉ.ಕ ಪ್ರವೇಶಕ್ಕೆ ಉಡುಪಿ ಜಿಲ್ಲಾಡಳಿತದ ಪ್ರಯತ್ನ ಪ್ಲಾಫ್!

-ಶ್ರೀಕಾಂತ ಹೆಮ್ಮಾಡಿ, ಕುಂದಾಪುರ ಕುಂದಾಪುರ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ಸಾವಿರಾರು ವಲಸೆ ಕಾರ್ಮಿಕರು ಊರಿಗೆ ಮರಳಲಾಗದೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಗೆ ಪ್ರವೇಶ ನಿರ್ಬಂದ ಹೇರಲಾದ ಪರಿಣಾಮ ಶನಿವಾರ ನಸುಕಿನ ಜಾವ ಜಿಲ್ಲೆಯ ಗಡಿಭಾಗವಾದ ಶಿರೂರು ಚೆಕ್‍ಪೋಸ್ಟ್ ಬಳಿ ವಲಸೆ ಕಾರ್ಮಿಕರು ಅತಂತ್ರಕ್ಕೆ ಸಿಲುಕಿದ ಘಟನೆ ನಡೆದಿದೆ. ದೇಶದೆಲ್ಲೆಡೆ ವ್ಯಾಪಕವಾಗಿ ಹಬ್ಬುತ್ತಿರುವ ಕೊರೋನಾ ಮಹಾಮಾರಿಯನ್ನು ನಿಯಂತ್ರಿಸಲು ಪ್ರಧಾನಮಂತ್ರಿ ಹೊರಡಿಸಿರುವ ಲಾಕ್‍ಡೌನ್ ಆದೇಶ ಜಾರಿಗೊಂಡ ದಿನದಿಂದಲೂ ವಲಸೆ ಕಾರ್ಮಿಕರು ಒಂದಲ್ಲ ಒಂದು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. […]