ಟೊಮೇಟೋ ಜ್ವರ– ಎಚ್ಚರಿಕೆ ಅಗತ್ಯ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಕೇರಳ –ತಮಿಳುನಾಡು ಗಡಿಯಲ್ಲಿರುವ ವಾಳಯಾರ್ ನಲ್ಲಿ 5 ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ 80 ಕ್ಕೂ ಅಧಿಕ ಮಕ್ಕಳಲ್ಲಿ ಟೊಮೇಟೋ ಜ್ವರ ಕಂಡು ಬಂದಿದ್ದು, ಉಡುಪಿ ಜಿಲ್ಲೆಯಲ್ಲಿ ಈ ರೋಗ ಲಕ್ಷಣ ಪತ್ತೆಯಾಗಿರುವುದಿಲ್ಲ. ಪಕ್ಕದ ಕೇರಳ ರಾಜ್ಯದಲ್ಲಿ ಈ ಜ್ವರವು ಪತ್ತೆಯಾದ ಕಾರಣ ಗಡಿಭಾಗದ ಜಿಲ್ಲೆಗಳು ಈ ಕುರಿತು ನಿಗಾ ವಹಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ. ಜ್ವರ ಕಾಣಿಸಿಕೊಳ್ಳುವ ಮಕ್ಕಳ ದೇಹದಲ್ಲಿ ಟೊಮೇಟೋ ಆಕಾರದ ಗುಳ್ಳೆಗಳು ಏಳುವುದರಿಂದ ಇದಕ್ಕೆ ಟೊಮೇಟೋ ಜ್ವರ ಎಂದು ಹೆಸರಿಡಲಾಗಿದ್ದು, […]