ನಾಳೆ ದ.ಕ. ಜಿಲ್ಲೆಯ ಶಾಲೆ, ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು ದ.ಕ. ಜಿಲ್ಲಾಧ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜುಲೈ 7ರ ಶುಕ್ರವಾರದಂದು ಶಾಲೆ, ಪಿ.ಯು. ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ನಾಳೆಯ ತನಕ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಿರಂತರವಾಗಿ ಮಳೆ ಮುಂದುವರೆಯುವ ಕಾರಣ ಮಕ್ಕಳ ಹಿತದೃಷ್ಟಿಯಿಂದ ರಜೆ ನೀಡಲಾಗಿದೆ. ಪ್ರಮುಖವಾಗಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳು, ಪಿಯು ಕಾಲೇಜುಗಳ ತನಕವೂ ರಜೆ ಘೋಷಣೆ ಮಾಡಲಾಗಿದೆ. ಸರಕಾರಿ, ಅನುದಾನಿತ ಅನುದಾನ ರಹಿತ ಶಾಲೆ ಕಾಲೇಜುಗಳಿಗೆ […]