ನಾಳೆ (ಜ.22) ಸಹಕಾರ ರತ್ನ ಪ್ರಶಸ್ತಿ ಪುರಸ್ಕತ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಅಭಿನಂದನಾ ಸಮಾರಂಭ
ಶತಸಂವತ್ಸರಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಡುಪಿಯ ಬಡಗಬೆಟ್ಟು ಕೆಡಿಟ್ ಕೋ ಆಪರೇಟಿವ್ ಸೊಸೈಟಿಯನ್ನು ಕಳೆದ 42 ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಅಭಿವೃದ್ದಿ ಪಥದಲ್ಲಿ ಮುನ್ನಡೆಸಿದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ಇವರಿಗೆ ಪ್ರಸಕ್ತ ವರ್ಷದಲ್ಲಿ ಸಹಕಾರ ಕ್ಷೇತ್ರದ ಮಹೋನ್ನತ ಗೌರವ “ಸಹಕಾರ ರತ್ನ” ಪ್ರಶಸ್ತಿ ಲಭಿಸುವುದರಿಂದ ದಿನಾಂಕ 22.01.2023ರ ಆದಿತ್ಯವಾರದಂದು ಪೂರ್ವಾಹ್ನ ಗಂಟೆ 9 ರಿಂದ ಉಡುಪಿಯ ಮಿಷನ್ ಕಂಪೌಂಡಿನಲ್ಲಿರುವ ಬಾಸೆಲ್ ಮಿಷನರೀಸ್ ಆಡಿಟೋರಿಯಂನಲ್ಲಿ ಅಭಿನಂದನಾ ಸಮಾರಂಭ ಹಾಗೂ ಸೇವಾ ಚಿಂತನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಉಡುಪಿಯ ಶಿವಳ್ಳಿ ಗ್ರಾಮದ […]