ಪ್ರವಾಸೋದ್ಯಮ ಅಭಿವೃದ್ದಿಗೆ ಕಾರ್ಯಪಡೆ ರಚನೆ:ಬಸವರಾಜ ಬೊಮ್ಮಾಯಿ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನೂ ಇನ್ನೂ ಉತ್ತಮ ರೀತಿಯಲ್ಲಿ ಅಭಿವೃದ್ದಿಗೊಳಿಸುವ ಉದ್ದೇಶದಿಂದ ಪ್ರತ್ಯೇಕ ಕಾರ್ಯಪಡೆ ರಚಿಸಲಾಗುವುದು ಎಂದು ರಾಜ್ಯ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಶುಕ್ರವಾರ ಜಿಲ್ಲಾಡಳಿತ ಉಡುಪಿ, ಪ್ರವಾಸೋದ್ಯಮ ಇಲಾಖೆ, ಮಲ್ಪೆಅಭಿವೃದ್ಧಿ ಸಮಿತಿ ಮತ್ತು ಕರಾವಳಿ ಪ್ರವಾಸೋದ್ಯಮ ಸಂಘಟನೆ(ಂಅಖಿ), ಉಡುಪಿ ಜಿಲ್ಲೆಇವರ ಸಹಯೋಗದಲ್ಲಿಪ್ರವಾಸೋದ್ಯಮ ಹಾಗೂ ಉದ್ಯೋಗ ಸರ್ವರಿಗೂಉಜ್ವಲ ಭವಿಷ್ಯ ಎಂಬ ಧ್ಯೇಯದೊಂದಿಗೆಜಿಲ್ಲಾಧಿಕಾರಿಕಚೇರಿ ಸಂಕೀರ್ಣದಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿ […]