ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯ ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ 45.70 ಕೋಟಿ ಅನುದಾನಕ್ಕೆ ಒಪ್ಪಿಗೆ

ಮೈಸೂರು: ಚಾಮುಂಡೇಶ್ವರಿ ದೇವಿ ದೇವಸ್ಥಾನದ ಮಹಿಷಾಸುರ ಪ್ರತಿಮೆ ಸುತ್ತಲಿನ ಪ್ರಾಂಗಣ, ದೇವಿಕೆರೆ, ನಂದಿ ಪ್ರತಿಮೆ, ದೇವಿ ಪಾದ, ಪ್ರವಾಸಿಗರ ವೀಕ್ಷಣಾ ಪ್ರದೇಶಗಳ ಸುತ್ತಲಿನ ಅಭಿವೃದ್ಧಿಗೆ ಹಾಗೂ ಭಕ್ತರು ಸರದಿ ಸಾಲಿನಲ್ಲಿ ನಿಲ್ಲುವ ಪ್ರದೇಶವನ್ನು ಅಭಿವೃದ್ಧಿ ಪಡಿಸುವುದನ್ನು ಪ್ರಸಾದ್ ಯೋಜನೆ ಒಳಗೊಂಡಿದೆ. ಮೈಸೂರಿನ ಚಾಮುಂಡೇಶ್ವರಿ ದೇವಿ ಸನ್ನಿಧಾನ ಅಭಿವೃದ್ಧಿಗೆ ಹಾಗೂ ವಿವಿಧ ಮೂಲ ಸೌಕರ್ಯ ಒದಗಿಸುವ ಕಾಮಗಾರಿಗಳಿಗಾಗಿ ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯವು ಪ್ರಸಾದ್ ಯೋಜನೆಯಡಿ 45.70 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆಯನ್ನು ನೀಡಿದೆ. ಚಾಮುಂಡೇಶ್ವರಿ ದೇವಿ ದೇವಸ್ಥಾನದ ಮಹಿಷಾಸುರ ಪ್ರತಿಮೆ […]