ನಾನ್ ಸಿಆರ್ ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕವಾಗಿ ಮುಳುಗಿ ಮರಳು ತೆಗೆಯಲು ಅವಕಾಶ ಕಲ್ಪಿಸಿ; ಉಡುಪಿ ಶಾಸಕ ರಘುಪತಿ ಭಟ್ ಅವರಿಂದ ಸಚಿವರಿಗೆ ಮನವಿ

ಉಡುಪಿ: ಕರ್ನಾಟಕದ ಕರಾವಳಿ ಭಾಗದ ನಾನ್ ಸಿಆರ್ ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕವಾಗಿ ಮಾನವ ಶ್ರಮದಿಂದ ಮುಳುಗಿ ಮರಳು ತೆಗೆಯಲು ಅವಕಾಶ ಕಲ್ಪಿಸುವಂತೆ ಶಾಸಕ ಕೆ ರಘುಪತಿ ಭಟ್ ಒತ್ತಾಯಿಸಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಬಸಪ್ಪ ಆಚಾರ್ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಶಾಸಕರು ಆಗ್ರಹಪಡಿಸಿದ್ದಾರೆ. ಸಭೆಯಲ್ಲಿ ಕರ್ನಾಟಕದ ಕರಾವಳಿ ಭಾಗಕ್ಕೆ ಪ್ರತ್ಯೇಕ ಮರಳು ನೀತಿ ಜಾರಿಗೊಳಿಸುವ ಬಗ್ಗೆ ಚರ್ಚಿಸಿ CRZ ವ್ಯಾಪ್ತಿಯಲ್ಲಿ ಮರಳು ತೆಗೆಯಲು ಇರುವ ಕೆಲವೊಂದು ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸಿ ಸುಗಮಗೊಳಿಸುವ […]