ಪೊಲೀಸ್ ಕಾನ್‌ಸ್ಟೇಬಲ್‌ಗಳ ನಿರ್ಗಮನ ಪಥ ಸಂಚಲನ

ಉಡುಪಿ, ಫೆ.24: ಉಡುಪಿ ಪೊಲೀಸ್ ತರಬೇತಿ ಶಾಲೆಯ ಸಶಸ್ತ್ರ ಮೀಸಲು ಪೊಲೀಸ್ ಕಾನ್‌ಸ್ಟೇಬಲ್‌ಗಳ 13 ನೇ ತಂಡದ ನಿರ್ಗಮನ ಪಥ ಸಂಚಲನವು ಫೆಬ್ರವರಿ 25 ರಂದು ಬೆಳಗ್ಗೆ 8 ಗಂಟೆಗೆ ನಗರದ ಪೊಲೀಸ್ ಕವಾಯತ್ ಚಂದು ಮೈದಾನ ಡಿ.ಎ.ಆರ್ ಇಲ್ಲಿ ನಡೆಯಲಿದೆ. ಪಥ ಸಂಚಲನ ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಬ್ರಮಣ್ಯ ಜೆ.ಎನ್, ಮಂಗಳೂರು ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕ ದೇವಜ್ಯೋತಿ ರೇ, ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಎನ್. ಉಪಸ್ಥಿತರಿರುವರು.