ಚಾಮರಾಜನಗರ ದುರಂತ: ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ
ಬೆಂಗಳೂರು: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ರೋಗಿಗಳ ಸಾವಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಹೈಕೋರ್ಟ್ ನ್ಯಾಯಮೂರ್ತಿ ಬಿ.ಎ. ಪಾಟೀಲ್ ನೇತೃತ್ವದಲ್ಲಿ ಏಕಸದಸ್ಯ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇ 3ರಂದು ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 19 ರೋಗಿಗಳು ಮೃತಪಟ್ಟಿದ್ದರು ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಿತಿ ತನಿಖೆ ನಡೆಸಲಿದೆ. ಪ್ರಕರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಚಾಮರಾಜನಗರ, ಮೈಸೂರು ಜಿಲ್ಲಾಧಿಕಾರಿಗಳು ಈ ಸಂಬಂಧಿತ ಎಲ್ಲ ದಾಖಲಾತಿಗಳನ್ನು ತನಿಖಾ ಸಮಿತಿಗೆ ಒಪ್ಪಿಸಲು ಆರೋಗ್ಯ ಇಲಾಖೆಗೆ ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ […]