‘ಟ್ರೈನ್‌ 18’ ರೈಲಿಗೆ ‘ವಂದೇ ಭಾರತ ಎಕ್ಸ್‌ಪ್ರೆಸ್’ ಹೆಸರು

ನವದೆಹಲಿ: ದೇಶಿಯ ತಂತ್ರಜ್ಞಾನ ವ್ಯವಸ್ಥೆಯಲ್ಲಿ ನಿರ್ಮಿಸಿದ ಅತಿ ವೇಗದ ರೈಲಿಗೆ ‘ವಂದೇ ಭಾರತ ಎಕ್ಸ್‌ಪ್ರೆಸ್’ ಎಂದು ಹೆಸರಿಡಲಾಗಿದೆ ಎಂದು ರೈಲ್ವೆ ಸಚಿವ ಪೀಯೂಷ್ ಗೋಯಲ್ ರವಿವಾರ ಈ ಮಾಹಿತಿ ತಿಳಿಸಿದ್ದಾರೆ. ಈ ರೈಲು ನಿರ್ಮಾಣ ಆರಂಭಿಸಿದಾಗ ‘ಟ್ರೈನ್‌ 18’ ಎಂದು ಹೆಸರಿಡಲಾಗಿತ್ತು. ಬಳಿಕ ಇದಕ್ಕೆ ಹೆಸರಿಡಲು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲಾಯಿತು. ಆದರೆ ಅಂತಿಮವಾಗಿ  ‘ವಂದೇ ಭಾರತ ಎಕ್ಸ್‌ಪ್ರೆಸ್’ ಎಂದು ನಿಗದಿಪಡಿಸಲಾಯಿತು. ಇದು ಗಣರಾಜ್ಯೋತ್ಸವ ಸಂದರ್ಭದಲ್ಲಿ ಜನರಿಗೆ ನೀಡುತ್ತಿರುವ ಕೊಡುಗೆಯಾಗಿದೆ ಎಂದರು. ದೆಹಲಿಯಿಂದ ವಾರಾಣಸಿಗೆ ಸಂಚರಿಸುವ ಸಾಮರ್ಥ್ಯ ಇರುವ ಈ ರೈಲನ್ನು ಪ್ರಧಾನಮಂತ್ರಿ ನರೇಂದ್ರ […]