ಜೂನಿಯರ್ ರೆಡ್‌ಕ್ರಾಸ್ ಕೌನ್ಸಿಲರ್‌ಗಳಿಗೆ ತರಬೇತಿ: ಸಮಾರೋಪ

ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ರಾಜ್ಯ ಶಾಖೆ ಬೆಂಗಳೂರು ಮತ್ತು ಉಡುಪಿ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ, ಪರಿಪೋಷಣಂ ಯೋಜನೆಯಡಿ ಅಂತರ್ಗತ ಪ್ರೌಢಶಾಲೆಗಳ ಜೂನಿಯರ್ ರೆಡ್‌ಕ್ರಾಸ್ ಕೌನ್ಸಿಲರ್‌ಗಳಿಗೆ ಹಮ್ಮಿಕೊಳ್ಳಲಾಗಿದ್ದ ಎರಡು ದಿನದ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭವು ಮಂಗಳವಾರ ನಗರದ ಅಜ್ಜರಕಾಡು ರೆಡ್‌ಕ್ರಾಸ್ ಭವನದಲ್ಲಿ ನಡೆಯಿತು. ರಾಜ್ಯ ಶಾಖೆ ಆಡಳಿತ ಮಂಡಳಿ ಸದಸ್ಯ ವಿ.ಜಿ. ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು, ಜೀವನದಲ್ಲಿ ಉತ್ತಮ ಆರೋಗ್ಯ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು, ಬೇರೆಯವರ ಕಷ್ಟಗಳಿಗೆ ಸ್ವಂದಿಸುವ ಮನೋಭಾವನೆ ಬೆಳೆಸಿಕೊಳ್ಳಲು […]