ತರಬೇತಿಯಿಂದ ಪರಿಪೂರ್ಣತೆ: ಎಸ್.ಟಿ ಸಿದ್ದಲಿಂಗಪ್ಪ
ಉಡುಪಿ: ತರಬೇತಿಯು ಅಧಿಕಾರಿ ಹಾಗೂ ಸಿಬ್ಬಂದಿಗಳಲ್ಲಿ ಜ್ಞಾನ, ಕೌಶಲ್ಯತೆ ಹಾಗೂ ಅತ್ಮವಿಶ್ವಾಸವನ್ನು ಹೆಚ್ಚಿಸಲಿದ್ದು, ಯಾವುದೇ ಉದ್ಯೋಗದಲ್ಲಿ ಪರಿಪೂರ್ಣತೆಯನ್ನು ಸಾಧಿಸುವಲ್ಲಿ ತರಬೇತಿಯು ಅತೀ ಅಗತ್ಯ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ ಸಿದ್ಧಲಿಂಗಪ್ಪ ಹೇಳಿದರು. ಅವರು ಗುರುವಾರ, ಮಲ್ಪೆಯ ಸಿ.ಎಸ್.ಪಿ ಕೇಂದ್ರ ಕಚೇರಿಯಲ್ಲಿ, ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ 2 ನೇ ತಂಡದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕರಾವಳಿ ಕಾವಲು ಪೊಲೀಸ್ ಘಟಕದ ವತಿಯಿಂದ ಹಮ್ಮಿಕೊಂಡಿರುವ ಈಜು ತರಬೇತಿ, ಪ್ರಥಮ […]