ಜಿಪಂ ಸಿಇಒ ಡಾ. ನವೀನ್ ಭಟ್ ವರ್ಗಾವಣೆ
ಉಡುಪಿ: ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಅವರನ್ನು ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕರನ್ನಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಕರ್ನಾಟಕ ಭವನ ನವದೆಹಲಿ ಇದರ ಸಹಾಯಕ ಕಮೀಷನರ್ ಆಗಿದ್ದ ಪ್ರಸನ್ನ ಎಚ್. ಅವರನ್ನು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನಾಗಿ ನೇಮಕಗೊಳಿಸಲಾಗಿದೆ.
ವರ್ಗಾವಣೆಗೊಂಡ ಚಿಕ್ಕಮಗಳೂರು ಪೊಲೀಸ್ ಅಧೀಕ್ಷಕಿ ಶೃತಿ ಬೀಳ್ಕೊಡಿಗೆ
ಚಿಕ್ಕಮಗಳೂರು: ಪೊಲೀಸ್ ಇಲಾಖೆಯಲ್ಲಿ ದಕ್ಷ ಹಾಗೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಎನ್.ಎಸ್.ಶೃತಿ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ವಿವಿಧ ಪಕ್ಷದ ಮುಖಂಡರು ಹಾಜರಿದ್ದರು. ಗೌರವ ಸ್ವೀಕರಿಸಿ ಮಾತನಾಡಿದ ಶೃತಿ, ಜಿಲ್ಲೆಯು ಶಾಂತಿಪ್ರಿಯವಾಗಿದ್ದು ಇಲ್ಲಿ ಸುಮಾರು ಮೂರು ವರ್ಷಕ್ಕೂ ಹೆಚ್ಚಿನ ಅವಧಿಯಿಂದ ಕರ್ತವ್ಯ ನಿರ್ವಹಿಸುತ್ತಿರುವುದು ಖುಷಿ ತಂದಿದೆ. ಹಿಂದೂ-ಮುಸ್ಲಿಂ ಸಮುದಾಯದವರು ಜಿಲ್ಲೆಯಲ್ಲಿ ಉತ್ತಮ ಬಾಂಧವ್ಯ ಹೊಂದಿರುವುದು ಹೆಮ್ಮೆ ತಂದಿದೆ ಎಂದರು. ಕೆಪಿಸಿಸಿ ರಾಜ್ಯ ವಕ್ತಾರ ಹೆಚ್.ಹೆಚ್.ದೇವರಾಜ್ ಮಾತನಾಡಿ, ಪೊಲೀಸ್ ಅಧೀಕ್ಷಕಿ ಶೃತಿ […]