ಸಾರಿಗೆ ನೌಕರರ ಪ್ರತಿಭಟನೆಗೆ ಸೆಡ್ಡು ಹೊಡೆದ ಸರ್ಕಾರ: ನಾಳೆಯಿಂದ ರಸ್ತೆಗಿಳಿಯಲಿವೆ ಖಾಸಗಿ ಬಸ್
ಬೆಂಗಳೂರು: ಸಾರಿಗೆ ನೌಕರರ ಪ್ರತಿಭಟನೆಗೆ ಸೆಡ್ಡು ಹೊಡೆದಿರುವ ರಾಜ್ಯ ಸರ್ಕಾರ ಖಾಸಗಿ ವಾಹನಗಳನ್ನ ರಸ್ತೆಗೆ ಇಳಿಸಲು ನಿರ್ಧರಿಸಿದೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಮಾತನಾಡಿ, ತಾತ್ಕಾಲಿಕವಾಗಿ ಖಾಸಗಿ ಬಸ್ಗಳ ಮೂಲಕ ಸಾರ್ವಜನಿಕರಿಗೆ ಸೇವೆ ನೀಡುತ್ತೇವೆ. ಖಾಸಗಿ ವಾಹನಗಳನ್ನ ರಸ್ತೆಗೆ ಇಳಿಸುವ ಸಂಬಂಧ ನಮ್ಮ ಸರ್ಕಾರ ನಿರ್ಧಾರ ಮಾಡಿದೆ ಎಂದರು. ನಾಳೆಯೂ ಸಿಬ್ಬಂದಿ ಪ್ರತಿಭಟನೆಯನ್ನು ಮುಂದುವರಿಸಿದರೆ ಖಂಡಿತವಾಗಿಯೂ ಖಾಸಗಿ ವಾಹನಗಳ ಮೂಲಕ ಜನರಿಗೆ ಸಾರಿಗೆ ಸೇವೆ ನೀಡುತ್ತೇವೆ ಎಂದು ತಿಳಿಸಿದರು.