ಸಾರಿಗೆ ನೌಕರರ ಮುಷ್ಕರ: ರಸ್ತೆಗಿಳಿಯದ ಕೆಎಸ್ ಆರ್ ಟಿಸಿ ಬಸ್, ಪರದಾಡಿದ ಪ್ರಯಾಣಿಕರು
ಬೆಂಗಳೂರು: ಆರನೇ ವೇತನ ಆಯೋಗದ ಶಿಫಾರಸು ಜಾರಿ ಸಹಿತ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಒಕ್ಕೂಟ ಇಂದಿನಿಂದ ಅನಿರ್ದಿಷ್ಟಾವಧಿವರೆಗೆ ಮುಷ್ಕರಕ್ಕೆ ಕರೆ ನೀಡಿದೆ.ಹಾಗಾಗಿ ರಾಜ್ಯದಲ್ಲಿ ಇಂದು ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳು ರಸ್ತೆಗಿಳಿದಿಲ್ಲ. ಹಲವೆಡೆ ಪ್ರಯಾಣಿಕರು ಪರದಾಡುತ್ತಿರುವ ದೃಶ್ಯ ಕಂಡುಬಂದಿದೆ. ಸದಾ ಪ್ರಯಾಣಿಕರಿಂದ ತುಂಬಿ ತುಲುಕುತ್ತಿದ್ದ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಸ್‌ಗಳು ನಿಂತಲ್ಲೇ ನಿಂತಿದ್ದು, ಪ್ರಯಾಣಿಕರು ಬಸ್ಸಿಗಾಗಿ ಕಾಯುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಬಸ್ ನಿಲ್ದಾಣಗಳಿಗೆ ಬೇರೆ ಊರುಗಳಿಂದ ಬಂದ ಪ್ರಯಾಣಿಕರು ಊರಿಗೆ ತೆರಳಲು ಖಾಸಗಿ […]