ಎರಡನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ: ರಾಜ್ಯದ ಬಹುತೇಕ ಕಡೆ ಸರ್ಕಾರಿ ಬಸ್ ಸಂಚಾರ ಸ್ಥಗಿತ
ಬೆಂಗಳೂರು: ಸರ್ಕಾರಿ ನೌಕರರನ್ನಾಗಿ ಮಾಡಬೇಕೆಂಬ ಬೇಡಿಕೆ ಮುಂದಿಟ್ಟುಕೊಂಡು ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಕೂಡ ರಾಜ್ಯದ ಬಹುತೇಕ ಕಡೆ ಸರ್ಕಾರಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರು ಪರದಾಟ ನಡೆಸಬೇಕಾಯಿತು. ಬೇಡಿಕೆ ಈಡೇರಿಸುವವರೆಗೂ ಮುಷ್ಕರ ನಿಲ್ಲಿಸುವುದಿಲ್ಲ ಎಂದು ನೌಕರರು ಪಟ್ಟುಹಿಡಿದಿದ್ದು, ಇದರಿಂದ ಮುಷ್ಕರ ತೀವ್ರ ಸ್ವರೂಪ ಪಡೆದುಕೊಳ್ಳುವ ಲಕ್ಷಣ ಕಾಣುತ್ತಿದೆ. ಶುಕ್ರವಾರ ಬೆಳಿಗ್ಗೆ ಡಿಪೋಗಳಿಗೆ ಬಂದ ನೌಕರರು ಬಸ್ ಹೊರಕ್ಕೆ ತೆಗೆಯದೆ ಮುಷ್ಕರ ಆರಂಭಿಸಿದರು. ಬಸ್ ಚಾಲನೆ ಮಾಡಲು ಹೊರಟ ನೌಕರರನ್ನೂ […]