ಕುಂದಾಪುರ: ತ್ರಾಸಿ ಗ್ರಾಮ ಪಂಚಾಯತಿಯ ಮಹಿಳಾ ಮತ್ತು ಮಕ್ಕಳ ಗ್ರಾಮಸಭೆ
ಕುಂದಾಪುರ : ತ್ರಾಸಿ ಗ್ರಾಮ ಪಂಚಾಯತಿಯ 2019-20ನೇ ಸಾಲಿನ ಮಹಿಳಾ ಮತ್ತು ಮಕ್ಕಳ ಗ್ರಾಮಸಭೆ ತ್ರಾಸಿ ಗ್ರಾಮ ಪಂಚಾಯತಿಯ ಅಂಬೇಡ್ಕರ್ ಸಭಾಭವನದಲ್ಲಿ ಶುಕ್ರವಾರ ಜರಗಿತು. ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧಾಕರ ಆಚಾರ್ಯ ಗ್ರಾಮ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಅಧಿಕಾರಿ ಮಮತಾ ನೊಡೆಲ್ ಅಧಿಕಾರಿಯಾಗಿದ್ದರು. ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ವಾಸಪ್ಪ ನಾಯ್ಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸವಿತಾ, ಆರೋಗ್ಯ ಇಲಾಖೆಯ ರಾಜೇಶ್ವರಿ ಇಲಾಖೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತ್ […]