ಮೇ.31 ರಂದು ನಾನು ರಾಜ್ಯಕ್ಕೆ ಬರುತ್ತೇನೆ: ವಿದೇಶದಿಂದ ವಿಡಿಯೋ ರಿಲೀಸ್‌ ಮಾಡಿದ ಪ್ರಜ್ವಲ್ ರೇವಣ್ಣ

ಬೆಂಗಳೂರು: ಲೋಕಸಭಾ ಚುನಾವಣೆಯ ಬಳಿಕ ನಾಪತ್ತೆಯಾಗಿದ್ದ ಪ್ರಜ್ವಲ್‌ ರೇವಣ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಮೇ 31 ರಂದು ನಾನು ರಾಜ್ಯಕ್ಕೆ ಬರುತ್ತೇನೆ ಎಂದು ಪ್ರಜ್ವಲ್‌ ರೇವಣ್ಣ ಹೇಳಿದ್ದಾರೆ. ವಿದೇಶದಿಂದ ವಿಡಿಯೋ ರಿಲೀಸ್‌ ಮಾಡಿದ ಅವರು ಬೆಂಗಳೂರಿಗೆ ಬಂದು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಎಸ್‌ಐಟಿ ಮುಂದೆ ಹಾಜರಾಗಿ ಉತ್ತರ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಕುಟುಂಬಸ್ಥರು ಮತ್ತು ರಾಜ್ಯದ ಜನತೆಯಲ್ಲಿ ಪ್ರಜ್ವಲ್‌ ರೇವಣ್ಣ ಕ್ಷಮೆ ಕೇಳಿದ್ದಾರೆ.ವಿದೇಶಕ್ಕೆ ಹೋಗುವ ಬಗ್ಗೆ ಮೊದಲೇ ಪ್ಲಾನ್ ಆಗಿತ್ತು. ವಿದೇಶಕ್ಕೆ ಹೋಗುವಾಗ ನನ್ನ […]