ತ್ರಿಶಾ ವಿದ್ಯಾ ಪಿಯು ಕಾಲೇಜು: ವಿಶ್ವ ಪರಿಸರ ದಿನಾಚರಣೆ.
ಉಡುಪಿ: ಪ್ರಸ್ತುತ ದಿನಮಾನದಲ್ಲಿ ಹಾಳಾಗುತ್ತಿರುವ ಪರಿಸರವನ್ನು ಉಳಿಸುವುದು ನಮ್ಮ ಕರ್ತವ್ಯ. ನಮ್ಮ ಮುಂದಿನ ಜನಾಂಗಕ್ಕೂ ಪರಿಸರವನ್ನು ಕಾಪಾಡಿಕೊಳ್ಳುವುದು ಅನಿವಾರ್ಯ. ನಾವೆಲ್ಲರೂ ಈ ಪರಿಸರವನ್ನು ಉಳಿಸುವ ಯೋಚನೆಯನ್ನು ಮಾಡಲೇಬೇಕು ಎಂದು ಇತ್ತೀಚಿಗೆ ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಜೆಸಿಐ ಕಟಪಾಡಿಯ ಅಧ್ಯಕ್ಷರಾದ ಪ್ರಶಾಂತ್ ಆರ್ ಎಸ್ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತ್ರಿಶಾ ವಿದ್ಯಾ ಪಿಯು ಕಾಲೇಜಿನ ಪ್ರಾಂಶುಪಾಲರಾದ ಡಾ. ಅನಂತ್ ಪೈ ಇವರು ಜಾಗತಿಕ ತಾಪಮಾನ […]