ಸಿ.ಎಸ್ ಪ್ರೊಫೆಷನಲ್ ಪರೀಕ್ಷೆ: ತ್ರಿಶಾ ಸಂಸ್ಥೆಯ ಚೈತನ್ಯ ಎಸ್.ಎಂ ಅಪರೂಪದ ಸಾಧನೆ

ಉಡುಪಿ: ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟಿರೀಸ್ ಆಫ್ ಇಂಡಿಯಾ ನಡೆಸಿರುವ ಸಿ.ಎಸ್ ಪ್ರೊಫೆಷನಲ್ ಪರೀಕ್ಷೆಯಲ್ಲಿ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಚೈತನ್ಯ ಎಸ್.ಎಂ ಇವರು 464 ಅಂಕಗಳೊಂದಿಗೆ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗಿದ್ದಾರೆ. ಇವರು ಸಾಗರದ ಮೋಹನ್ ಎಸ್ ಹಾಗೂ ಆಶಾ ಎಲ್.ಆರ್ ದಂಪತಿಯ ಪುತ್ರಿ. ತಮ್ಮ ಪದವಿ ವಿದ್ಯಾಭ್ಯಾಸವನ್ನು ಕಟಪಾಡಿಯ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನಲ್ಲಿ ನಡೆಸುತ್ತಿದ್ದು ಎರಡನೇ ವರ್ಷದ ಬಿ.ಕಾಂ ವ್ಯಾಸಂಗ ಪೂರ್ಣಗೊಳಿಸುತ್ತಿರುವಾಗಲೇ ಸಿ.ಎಸ್ ಕೋರ್ಸ್ ನ ಎಲ್ಲಾ ಹಂತಗಳನ್ನು ಮುಗಿಸಿರುವುದು ಅಪರೂಪದ ಸಾಧನೆಯಾಗಿದೆ. ಈ […]

ತ್ರಿಶಾ ವಿದ್ಯಾ ಪಿ.ಯು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪುನಶ್ಚೇತನ ಕಾರ್ಯಕ್ರಮ

ಉಡುಪಿ: ಸತತ ಪರಿಶ್ರಮ ಇದ್ದಾಗ ಮಾತ್ರ ಗೆಲುವು ಸಾಧ್ಯ. ಪ್ರಸ್ತುತ ಜಗತ್ತಿನಲ್ಲಿ ಯಾವುದೇ ಕ್ಷೇತ್ರದಲ್ಲಾದರೂ ಅವಕಾಶಗಳು ಬಹಳಷ್ಟಿವೆ. ಅದನ್ನು ಸಾಧಿಸಲು ಛಲ ಹಾಗೂ ಪ್ರಯತ್ನ ಬೇಕು. ಶಿಕ್ಷಣ ಮಾತ್ರ ವಿದ್ಯಾರ್ಥಿಯ ಜೀವನವನ್ನು ಬೆಳಗಿಸುವಂತದ್ದು. ಜೊತೆಗೆ ಬದಲಾವಣೆಗಳಿಗೆ ಹೊಂದಿಕೊಂಡು ಸಮಸ್ಯೆಗಳನ್ನು ಹೇಗೆ ನಿಭಾಯಿಸುತ್ತೇವೆ ಅನ್ನುವುದು ನಿರ್ಣಾಯಕ. ದೈಹಿಕ ಹಾಗೂ ಮಾನಾಸಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ವಿದ್ಯಾರ್ಥಿಯು ಪ್ರಬುದ್ಧನಾಗಲು ಸಾಧ್ಯ ಎಂದು ತ್ರಿಶಾ ಸಂಸ್ಥೆಯ ಸಂಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಹೇಳಿದರು. ಅವರು ತ್ರಿಶಾ ವಿದ್ಯಾ ಪಿಯು ಕಾಲೇಜಿನ ಪುನಶ್ಚೇತನ […]

ತ್ರಿಶಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ನಾಯಕತ್ವ ಕಾರ್ಯಾಗಾರ

ಕಟಪಾಡಿ:  ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳಿಗೆ ಶಿಸ್ತು ಸಂಯಮ, ನಾಯಕತ್ವದ ಗುಣ ಮತ್ತು ಪ್ರೇರಣೆಯ ಕುರಿತಾದ ಕಾರ್ಯಾಗಾರವು  ತ್ರಿಶಾ ವಿದ್ಯಾ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮೇಜರ್ ರಾಧಾಕೃಷ್ಣ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ 120ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿ, ಯುವ ಜನಾಂಗದಲ್ಲಿ ಶಿಸ್ತು ಬಹಳ ಮುಖ್ಯ ಹಾಗೂ ಸತತ ಪ್ರಯತ್ನದಿಂದ ಜೀವನದಲ್ಲಿ ಗೆಲುವು ಸಾಧ್ಯ ಎನ್ನುವುದನ್ನು ತಿಳಿದುಕೊಂಡರು. ಕಾರ್ಯಕ್ರಮದಲ್ಲಿ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೊ. […]

ಕಟಪಾಡಿ: ತ್ರಿಶಾ ವಿದ್ಯಾ ಪಿಯು ಕಾಲೇಜಿನಲ್ಲಿ ಶಿಕ್ಷಕ ಹುದ್ದೆಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ

ಕಟಪಾಡಿ: ಶೈಕ್ಷಣಿಕ ಕ್ಷೇತ್ರದಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿವಿಧ ಕೋರ್ಸ್ ಗಳಿಗೆ ಉತ್ಕೃಷ್ಟ ಗುಣಮಟ್ಟದ ಕೋಚಿಂಗ್ ತರಗತಿಗಳನ್ನು ನಡೆಸುತ್ತಿರುವ ತ್ರಿಶಾ ವಿದ್ಯಾ ಪಿಯು ಕಾಲೇಜಿನಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಖಾಲಿ ಇರುವ ಹುದ್ದೆಗಳು: 1.ಭಾಷಾ ಶಿಕ್ಷಕರು (ಪಾರ್ಟ್ ಟೈಮ್) 2.ವಿಜ್ಞಾನ ವಿಷಯ ಬೋಧಕರು 3.ವಾಣಿಜ್ಯ ವಿಷಯ ಬೋಧಕರು 4.ಲ್ಯಾಬ್ ಅಟೆಂಡರ್ ಗಳು ಎಲ್ಲಾ ಹುದ್ದೆಗಳಿಗೂ ಆಯಾ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಮತ್ತು 2 ವರ್ಷಕ್ಕಿಂತ ಹೆಚ್ಚಿನ ಬೋಧನ ಅನುಭವ […]